22 ಹನ್ನಳು ಹೋಗದೆ ತನ್ನ ಗಂಡನಿಗೆ, "ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು," ಎಂದಳು.
23 ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, "ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ," ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.
24 ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.