11 ಆದರೆ ಸಮುಯೇಲನು, "ನೀನೇನು ಮಾಡಿದಿ?" ಎಂದು ಸೌಲನನ್ನು ಕೇಳಿದನು.
ಸೌಲನು, "ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು. 12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು," ಎಂದನು.