Pular para o conteúdo
Publicidade

1 ಸಮುಯೇಲ 17:4,33,37,40,45,49

OKCV Kannada Contemporary Version

4 ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.

33 ಆಗ ಸೌಲನು ದಾವೀದನಿಗೆ, "ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ," ಎಂದನು.

37 ಇದಲ್ಲದೆ ದಾವೀದನು, "ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು," ಎಂದನು.

ಆಗ ಸೌಲನು ದಾವೀದನಿಗೆ, "ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ," ಎಂದನು.

40 ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು.

45 ದಾವೀದನು ಫಿಲಿಷ್ಟಿಯನಿಗೆ, "ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.

49 ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.

Em outras traduções

  1. IRVKAN Indian Revised Version (IRV) - Kannada - 2019

    4 ಫಿಲಿಷ್ಟಿಯರ ಪಾಳೆಯದಿಂದ 17:4 ಯೆಹೋ. 11:22.ಗತ್ ಊರಿನವನಾದ 17:4 2 ಸಮು 21:19. ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.

    33 ಸೌಲನು ಅವನಿಗೆ, "ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು" ಎಂದು ಹೇಳಿದನು. 37 17:37 2 ತಿಮೊ. 4:17. ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು" ಎಂದನು. ಆಗ ಸೌಲನು ದಾವೀದನಿಗೆ "ಹೋಗು ಯೆಹೋವನು ನಿನ್ನ ಸಂಗಡ ಇರಲಿ" ಎಂದು ಹೇಳಿ, 40 ತನ್ನ ಕೋಲನ್ನು ತೆಗೆದುಕೊಂಡು ಹೊರಟು, ಹಳ್ಳದಲ್ಲಿನ ಐದು ನುಣುಪುಕಲ್ಲುಗಳನ್ನು ಆರಿಸಿಕೊಂಡು, ಅವುಗಳನ್ನು ಕುರುಬರ ಪದ್ಧತಿಯಂತೆ ತನಗಿರುವ ಸೊಂಟದ ಚೀಲದಲ್ಲಿ ಹಾಕಿ ಕೈಯಲ್ಲಿ 17:40 ನ್ಯಾಯ 20:16.ಕವಣೆಯನ್ನು ಹಿಡಿದು ಫಿಲಿಷ್ಟಿಯನ ಬಳಿಗೆ ಹೋದನು.

    45 ಆಗ ದಾವೀದನು ಅವನಿಗೆ, "ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ. 49 ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.