ದಾವೀದನ ಮೇಲೆ ಸೌಲನ ಅಸೂಯೆ
1 ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು. 3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. 4 ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.