ದಾವೀದನು ಗಾತಿನಲ್ಲಿ
10 ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು. 11 ಆಕೀಷನ ಸೇವಕರು ಅವನಿಗೆ, "ಇವನು ನಾಡಿನ ಅರಸನಾದ ದಾವೀದನಲ್ಲವೋ?
" ‘ಸೌಲನು ಸಾವಿರಗಳನ್ನೂ,
ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’
ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?"
12 ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ, 13 ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
14 ಆಗ ಆಕೀಷನು ತನ್ನ ಸೇವಕರಿಗೆ, "ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ? 15 ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?" ಎಂದನು.