ಆರಾಧನೆಯ ಕ್ರಮ
1 ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ. 2 ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು. 3 ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ. 4 ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.