ಕರ್ತ ಯೇಸುವಿನ ದಿನವು
1 ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ. 2 ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ. 3 ಆದರೆ, "ಸಮಾಧಾನ, ಸುರಕ್ಷಿತ," ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.