4 ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ. 5 ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. 6 ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ. 7 ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ. 8 ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. 9 ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
Publicidade