Pular para o conteúdo
Publicidade

2 ಕೊರಿಂಥದವರಿಗೆ 11:23-30

23 ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು. 24 ಯೆಹೂದ್ಯರ ಕೈಯಿಂದ ಐದು ಬಾರಿ ನಲ್ವತ್ತಕ್ಕೆ ಒಂದು ಕಡಿಮೆ ಛಡಿ ಏಟುಗಳನ್ನು ತಿಂದಿದ್ದೇನೆ. 25 ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು. 26 ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು. 27 ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು. 28 ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ. 29 ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?

30 ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.

Estes versículos te tocaram? Ore agora!

+581 estão orando agora.

Junte-se à corrente de oração.