18 ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: 19 ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ. 20 ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.
Publicidade