3 ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು. 4 ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.
15 ಆಗ ಯಹಜೀಯೇಲನು, "ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ. 17 ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ," ಎಂದನು.
22 ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.