17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ. 18 ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ.
ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.