ನೀರನ್ನು ಶುದ್ಧಮಾಡಿದ್ದು
19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, "ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು," ಎಂದರು.
20 ಅದಕ್ಕವನು, "ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ," ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.
21 ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, " ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ," ಎಂದನು. 22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.