2 ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ, 3 "ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ," ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.
Publicidade