ನಂಬಿಗಸ್ತನಾಗಿರಲು ಪ್ರೋತ್ಸಾಹ
3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ. 5 ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.