ಪ್ರಾರ್ಥನೆಗಾಗಿ ಬೇಡಿಕೆ
1 ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ. 2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.