Pular para o conteúdo
Publicidade

3 ಯೋಹಾನನು 1

1 ಹಿರಿಯನು,

ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:

2 ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. 3 ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. 4 ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

5 ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. 6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ. 7 ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ. 8 ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.

9 ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ. 10 ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.

11 ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. 12 ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

13 ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ. 14 ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.

15 ನಿನಗೆ ಶಾಂತಿ ಇರಲಿ.

ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನ್ನು ಹೆಸರು ಹೆಸರಾಗಿ ವಂದಿಸು.

Estes versículos te tocaram? Ore agora!

+581 estão orando agora.

Junte-se à corrente de oração.

3 João
Ver todos os capítulos de 3 João