ಸಮುದ್ರದಿಂದ ಹೊರಬಂದ ಮೃಗ
1 ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು. 4 ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, "ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?" ಎಂದರು.
16 ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ 17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.
18 ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.