13 ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು. 14 ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.
15 "ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು."
16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.