9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು. 10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.
Publicidade