ನೂತನ ಆಕಾಶ ಮತ್ತು ನೂತನ ಭೂಮಿ
1 ತರುವಾಯ, "ನೂತನ ಆಕಾಶವನ್ನೂ ನೂತನ ಭೂಮಿಯನ್ನೂ"21:1 ಯೆಶಾಯ 65:17 ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ. 2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು. 3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.