12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು. 13 ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. 14 ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.
Publicidade