8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು:
" ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು,
ಅವರು ಸರ್ವಶಕ್ತರು,’4:8 ಯೆಶಾಯ 6:3
ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು."