ಚರ್ಮದ ಸುರುಳಿ ಮತ್ತು ಕುರಿಮರಿ
1 ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. 2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, "ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?" ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.
6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.