ಮುದ್ರೆಗಳು
1 ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, "ಬಾ!" ಎಂದು ಹೇಳುವುದನ್ನು ಕೇಳಿದೆನು. 2 ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.
9 ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು. 10 ಅವರು ಮಹಾಶಬ್ದದಿಂದ, "ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?" ಎಂದು ಕೂಗಿದರು. 11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.