7 ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, "ಬಾ" ಎಂದು ಕರೆಯುವ ಧ್ವನಿಯನ್ನು ಕೇಳಿದೆನು. 8 ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.
Publicidade