ಮುದ್ರಿತರಾದ 1,44,000 ಜನರು
1 ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು. 2 ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ, 3 "ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!" ಎಂದು ಹೇಳಿದನು. 4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.
5 ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000,
ರೂಬೇನ್ ಕುಲದಿಂದ 12,000,
ಗಾದ್ ಕುಲದಿಂದ 12,000,
6 ಆಶೇರ್ ಕುಲದಿಂದ 12,000,
ನಫ್ತಲೀಮ ಕುಲದಿಂದ 12,000,
ಮನಸ್ಸೆ ಕುಲದಿಂದ 12,000,
7 ಸಿಮೆಯೋನ್ ಕುಲದಿಂದ 12,000,
ಲೇವಿ ಕುಲದಿಂದ 12,000,
ಇಸ್ಸಾಕರ್ ಕುಲದಿಂದ 12,000,
8 ಜೆಬುಲೋನ್ ಕುಲದಿಂದ 12,000,
ಯೋಸೇಫನ ಕುಲದಿಂದ 12,000,
ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.