9 ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
10 ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು, 11 "ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು," ಎಂದು ಹೇಳಿದರು.