ಪೌಲನಿಗೆ ಉಂಟಾದ ಮಕೆದೋನ್ಯ ಮನುಷ್ಯನ ದರ್ಶನ
6 ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು. 7 ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.