22 "ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ. 23 ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ. 24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.
Publicidade