35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ," ಎಂದನು.
36 ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು. 37 ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು. 38 "ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ," ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.