11 ಪವಿತ್ರ ವೇದದಲ್ಲಿ,
" ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ
ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’4:11 ಕೀರ್ತನೆ 118:22
ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ. 12 ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ," ಎಂದನು.