29 ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ. 30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ."
31 ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.