ಅನನೀಯ ಮತ್ತು ಸಪ್ಫೈರ
1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು. 2 ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.
3 ಆದರೆ ಪೇತ್ರನು, "ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ? 4 ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ," ಎಂದು ನುಡಿದನು.