9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ! 10 ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ. 11 ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.
Publicidade