Pular para o conteúdo
Publicidade

ಧರ್ಮೋಪದೇಶಕಾಂಡ 14:22,23,26,28,29

OKCV Kannada Contemporary Version

ಬೆಳೆಯ ದಶಮಾಂಶ

22 ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. 23 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ. 26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು.

28 ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು. 29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.

Em outras traduções

  1. IRVKAN Indian Revised Version (IRV) - Kannada - 2019

    22 ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು. 23 ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.

    26 ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.

    28 ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು. 29 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.