ವಿಧೇಯತೆಗೆ ಆಶೀರ್ವಾದ
1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು. 2 ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳಿ ಪಾಲಿಸಿದರೆ, ಈ ಎಲ್ಲಾ ಆಶೀರ್ವಾದಗಳು ನಿಮ್ಮ ಮೇಲೆ ಬಂದು, ನಿಮ್ಮೊಂದಿಗಿರುವವು:
12 ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.