9 ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ. 10 ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, "ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು," ಎಂದರು.
Publicidade