5 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು. 6 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು. 7 ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.
20 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, "ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?" ಎಂದು ನಿಮ್ಮನ್ನು ಕೇಳುವರು. 21 ಆಗ ನೀವು ಅವರಿಗೆ, "ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು. 22 ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು. 23 ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು. 24 ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ. 25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು," ಎಂದು ಹೇಳಬೇಕು.