Pular para o conteúdo
Publicidade

ಪ್ರಸಂಗಿ 11

ನೀರಿನ ಮೇಲೆ ರೊಟ್ಟಿ

1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು.

ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.

2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು.

ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.

3 ಮೋಡಗಳು ಮಳೆಯಿಂದ ತುಂಬಿದ್ದರೆ,

ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ.

ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ,

ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.

4 ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ.

ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ.

5 ಗಾಳಿಯ ಚಲನೆಯನ್ನಾಗಲಿ

ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ,

ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ

ದೇವರ ಕೆಲಸವನ್ನು ನೀನು ಗ್ರಹಿಸಲಾರೆ.

6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು.

ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ.

ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು.

ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.

ಸೃಷ್ಟಿಕರ್ತ ದೇವರನ್ನು ಸ್ಮರಿಸು

7 ಬೆಳಕು ಹಿತಕರ.

ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ.

8 ಒಬ್ಬನು ಅನೇಕ ವರ್ಷಗಳು ಬದುಕಿ,

ಅವುಗಳಲ್ಲೆಲ್ಲಾ ಸಂತೋಷಪಟ್ಟರೂ

ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ,

ಏಕೆಂದರೆ ಅಂಥ ದಿನಗಳು ಬಹಳ.

ಮುಂದಾಗುವುದೆಲ್ಲವೂ ವ್ಯರ್ಥವೇ.

9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು.

ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ.

ನೀನು ನಿನ್ನ ಮನಸ್ಸಿಗೆ ಬಂದಂತೆಯೂ

ನಿನ್ನ ಕಣ್ಣಿನ ನೋಟದಂತೆಯೂ ನಡೆ.

ಆದರೆ ಈ ಎಲ್ಲಾ ಸಂಗತಿಗಳಿಗಾಗಿ

ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.

10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು.

ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು.

ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.

Estes versículos te tocaram? Ore agora!

+581 estão orando agora.

Junte-se à corrente de oração.