9 ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ.
ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
12 ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
ಇಬ್ಬರು ಎದುರಾಗಿ ನಿಲ್ಲಬಹುದು.
ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.