ಕ್ರಿಸ್ತನಲ್ಲಿ ಜೀವಂತವಾಗಿರುವುದು
1 ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ. 2 ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ. 3 ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.