26 "ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,"4:26 ಕೀರ್ತನೆ 4:4 ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. 27 ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.
29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ. 31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. 32 ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.