19 ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ. 20 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
ವಿಶ್ವಾಸಿಗಳ ಕುಟುಂಬಕ್ಕೆ ಬುದ್ಧಿವಾದಗಳು
21 ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.