25 ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ, 27 ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು. 28 ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
Publicidade
ಎಫೆಸದವರಿಗೆ 5
Estes versículos te tocaram? Ore agora!
+581 estão orando agora.
Junte-se à corrente de oração.