11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.