13 ಅದಕ್ಕೆ ಮೋಶೆಯು ಜನರಿಗೆ, "ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ. 14 ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ," ಎಂದನು.