12 ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
13 ಕೊಲೆ ಮಾಡಬೇಡ.
14 ವ್ಯಭಿಚಾರ ಮಾಡಬೇಡ.
15 ಕದಿಯಬೇಡ.
16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.
17 ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ."