Pular para o conteúdo
Publicidade

ವಿಮೋಚನಕಾಂಡ 20:18-26

18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು. 19 ಅವರು ಮೋಶೆಗೆ, "ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ," ಎಂದು ವಿನಂತಿಸಿಕೊಂಡರು.

20 ಆಗ ಮೋಶೆಯು ಜನರಿಗೆ, "ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ," ಎಂದನು.

21 ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.

ವಿಗ್ರಹಗಳು ಮತ್ತು ಬಲಿಪೀಠ

22 ಯೆಹೋವ ದೇವರು ಮೋಶೆಗೆ, "ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ. 23 ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.

24 " ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. 25 ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ. 26 ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.

Estes versículos te tocaram? Ore agora!

+581 estão orando agora.

Junte-se à corrente de oração.