Pular para o conteúdo
Publicidade

ವಿಮೋಚನಕಾಂಡ 20:3-11

3 "ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

4 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು. 5 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು. 6 ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.

7 ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.

8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ. 9 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು. 10 ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. 11 ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.

Estes versículos te tocaram? Ore agora!

+581 estão orando agora.

Junte-se à corrente de oração.